ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. 

ರಾಜ್ಯ ರಾಜಕೀಯದಲ್ಲಿ ಸಚಿವರನ್ನು ಗುರಿಯಾಗಿಸಿಕೊಂಡು ಸ್ಟಿಂಗ್ ಆಪರೇಷನ್ ನಡೆಸಲಾಗುತ್ತಿದೆ ಎಂಬ ಚರ್ಚೆ ನಡುವೆಯೇ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.


ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಕೆಲವರು ಪ್ರಯತ್ನಿಸಿದ್ದರು ಎಂದು ಅವರು ಆರೋಪಿಸಿದ್ದಾರೆ. ಜಿಎಸ್‌ಟಿ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಮಾತನಾಡುವ ನೆಪದಲ್ಲಿ ಕೆಲವರು ತಮ್ಮ ಬಳಿ ಬಂದಿದ್ದರು ಎಂದು ಡಿಕೆಶಿ ಹೇಳಿದ್ದಾರೆ.


ಅವರ ಮೇಲೆ ಮೊದಲೇ ಅನುಮಾನ ಬಂದಿದ್ದರಿಂದ ಪೊಲೀಸರ ಮೂಲಕ ಮಾಹಿತಿ ಪಡೆದು, ದಾಖಲೆಗಳು ಹಾಗೂ ಫೋಟೋಗಳನ್ನು ಸಂಗ್ರಹಿಸಿ ಇಟ್ಟುಕೊಂಡಿರುವುದಾಗಿ ತಿಳಿಸಿದ್ದಾರೆ. ಅಗತ್ಯವಿದ್ದರೆ ಆ ದಾಖಲೆಗಳನ್ನು ಬಿಡುಗಡೆ ಮಾಡುವುದಾಗಿಯೂ ಹೇಳಿದ್ದಾರೆ.


ಡ್ಯಂತ್ರದ ಹಿಂದೆ ಯಾರಿದ್ದಾರೆ, ಯಾರು ಹಣಕಾಸು ಒದಗಿಸುತ್ತಿದ್ದಾರೆ ಮತ್ತು ಇದರ ಹಿಂದೆ ಇರುವ ಪ್ರಮುಖ ವ್ಯಕ್ತಿ ಯಾರು ಎಂಬುದು ತಮಗೆ ಸ್ಪಷ್ಟವಾಗಿ ತಿಳಿದಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.