‘ಪ್ರೇಮದ ಊರಲಿ’ ಸಿನಿಮಾ ಟಿಕೆಟ್ ವಿಚಾರವಾಗಿ ಹಾವೇರಿಯ ಮಾಗಾವಿ ಚಿತ್ರಮಂದಿರದಲ್ಲಿ ಇಬ್ಬರು ಮಹಿಳೆಯರ ನಡುವೆ ಗಲಾಟೆ ನಡೆದಿದೆ ಎನ್ನಲಾಗಿದೆ.
ಹಾವೇರಿ: ‘ಪ್ರೇಮದ ಊರಲಿ’ ಸಿನಿಮಾ ಟಿಕೆಟ್ ವಿಚಾರವಾಗಿ ಹಾವೇರಿಯ ಮಾಗಾವಿ ಚಿತ್ರಮಂದಿರದಲ್ಲಿ ಇಬ್ಬರು ಮಹಿಳೆಯರ ನಡುವೆ ಗಲಾಟೆ ನಡೆದಿರುವ ಘಟನೆ ವರದಿಯಾಗಿದೆ.
ಮನೋಜ್ ಕುಮಾರ್ ನಿರ್ದೇಶನದ ಈ ಚಿತ್ರದಲ್ಲಿ ರಂಗಾಯಣ ರಘು, ಶ್ರೀರಾಮ್, ತಪಸ್ವಿನಿ ಪೂಣಚ್ಚ ಹಾಗೂ ರಮಿಕಾ ಶಿವು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಸೆಪ್ಟೆಂಬರ್ 25ರಂದು ಬಿಡುಗಡೆಯಾದ ಸಿನಿಮಾ ಪ್ರೇಕ್ಷಕರ ಗಮನ ಸೆಳೆದಿದೆ.
ಈ ನಡುವೆ, ಚಿತ್ರಮಂದಿರದಲ್ಲಿ ಟಿಕೆಟ್ ವಿಚಾರವಾಗಿ ಇಬ್ಬರು ಮಹಿಳೆಯರ ನಡುವೆ ಮಾತಿನ ಚಕಮಕಿ ಆರಂಭವಾಗಿ, ಬಳಿಕ ಪರಸ್ಪರ ಹೊಡೆದಾಟದ ಹಂತಕ್ಕೆ ತಲುಪಿದೆ ಎನ್ನಲಾಗಿದೆ. ಜಗಳದ ವೇಳೆ ಮಾಂಗಲ್ಯ ಸರಕ್ಕೂ ಹಾನಿಯಾಗಿದೆ ಎಂದು ವರದಿಯಾಗಿದೆ.
ಸಿನಿಮಾ ವೀಕ್ಷಿಸಲು ಬಂದಿದ್ದ ಮಹಿಳೆಯರು ಕೊನೆಗೆ ಚಿತ್ರ ನೋಡದೆ ಹಿಂದಿರುಗಿದ್ದಾರೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳು ಲಭ್ಯವಾಗಬೇಕಿದೆ.