Ramanagara ಜಿಲ್ಲೆಯ ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಚಂದ್ರಪ್ಪ ಸರ್ಕಲ್ ಬಳಿ ಕಾರಿನಲ್ಲೇ ಕ್ಯಾಬ್ ಚಾಲಕ ಪುಷ್ಪರಾಜ್ (29) ಶವವಾಗಿ ಪತ್ತೆಯಾಗಿದ್ದಾರೆ.

Ramanagara : ಗ್ರಾಹಕರನ್ನು ಡ್ರಾಪ್ ಮಾಡಿ ಕಾರಿನಲ್ಲೇ ವಿಶ್ರಾಂತಿ ಪಡೆಯುತ್ತಿದ್ದ ಕ್ಯಾಬ್ ಚಾಲಕನೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಚಂದ್ರಪ್ಪ ಸರ್ಕಲ್ ಬಳಿ ನಡೆದಿದೆ.


ಬೆಂಗಳೂರಿನ ಕೆ.ಪಿ. ಅಗ್ರಹಾರ ಮೂಲದ ಪುಷ್ಪರಾಜ್ (29) ಮೃತ ಕ್ಯಾಬ್ ಚಾಲಕ. ಗ್ರಾಹಕರನ್ನು ತಾವರೆಕೆರೆ ವ್ಯಾಪ್ತಿಯಲ್ಲಿ ಡ್ರಾಪ್ ಮಾಡಿದ ಬಳಿಕ ಲೇಔಟ್‌ವೊಂದರಲ್ಲಿ ಕಾರು ಪಾರ್ಕ್ ಮಾಡಿ ವಿಶ್ರಾಂತಿ ಪಡೆಯುತ್ತಿದ್ದರು.


ಬೆಳಗ್ಗೆಯಿಂದ ಕಾರು ಒಂದೇ ಸ್ಥಳದಲ್ಲಿ ನಿಂತಿದ್ದನ್ನು ಗಮನಿಸಿದ ಸ್ಥಳೀಯರು ಪರಿಶೀಲಿಸಿದಾಗ ಚಾಲಕ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.

ಹೃದಯಾಘಾತದಿಂದ ಸಾವು ಸಂಭವಿಸಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ತಾವರೆಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.