ಆರೋಗ್ಯ ಸಚಿವ ಯು.ಟಿ. ಖಾದರ್ ನಡುರಾತ್ರಿ ಚನ್ನಪಟ್ಟಣ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಜನರಲ್ ವಾರ್ಡ್, ಐಸಿಯು, ಶೌಚಾಲಯ ಹಾಗೂ ಸಿಬ್ಬಂದಿ ಹಾಜರಾತಿ ಪರಿಶೀಲಿಸಿದರು. 

ರಾಮನಗರ: ಆರೋಗ್ಯ ಸಚಿವ ಯು.ಟಿ. ಖಾದರ್ ನಡುರಾತ್ರಿ 2 ಗಂಟೆ ಸುಮಾರಿಗೆ ಚನ್ನಪಟ್ಟಣ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.


ಜನರಲ್ ವಾರ್ಡ್, ಐಸಿಯು ಹಾಗೂ ಶೌಚಾಲಯ ಪರಿಶೀಲಿಸಿದ ಸಚಿವರು, ಸಿಬ್ಬಂದಿ ಹಾಜರಾತಿ ಬಗ್ಗೆ ಮಾಹಿತಿ ಪಡೆದು ವೈದ್ಯರಿಂದ ಆಸ್ಪತ್ರೆಯ ವ್ಯವಸ್ಥೆಗಳ ಕುರಿತು ಮಾಹಿತಿ ಸಂಗ್ರಹಿಸಿದರು.


ಈ ವೇಳೆ ಆಸ್ಪತ್ರೆಯಲ್ಲಿ ಸೌಲಭ್ಯಗಳಿದ್ದರೂ ಔಷಧಿಗಳನ್ನು ಹೊರಗಿನ ಮೆಡಿಕಲ್‌ಗಳಿಗೆ ಬರೆದುಕೊಡುತ್ತಿರುವ ವಿಚಾರ ಸಚಿವರ ಗಮನಕ್ಕೆ ಬಂದಿದೆ. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಯು.ಟಿ. ಖಾದರ್, ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು.


ಸಾರ್ವಜನಿಕರಿಗೆ ಆಸ್ಪತ್ರೆಯಲ್ಲೇ ಅಗತ್ಯ ಚಿಕಿತ್ಸೆ ಹಾಗೂ ಔಷಧಿ ಸೌಲಭ್ಯ ದೊರೆಯುವಂತೆ ನೋಡಿಕೊಳ್ಳಬೇಕು. ರೋಗಿಗಳಿಗೆ ಯಾವುದೇ ತೊಂದರೆಯಾಗದಂತೆ ಕರ್ತವ್ಯ ನಿರ್ವಹಿಸುವಂತೆ ಸಿಬ್ಬಂದಿಗೆ ಸಚಿವರು ಸೂಚಿಸಿದರು.