Ramanagara ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಬಳಿ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ತಡರಾತ್ರಿ ಅಪಘಾತ ಸಂಭವಿಸಿದೆ.
Ramanagara : ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ತಡರಾತ್ರಿ ಅಪಘಾತ ಸಂಭವಿಸಿದ್ದು, ರಸ್ತೆ ದಾಟುತ್ತಿದ್ದ ಯುವತಿಯೊಬ್ಬರು ಕಾರು ಡಿಕ್ಕಿಯಾಗಿ ಮೃತಪಟ್ಟಿರುವ ಘಟನೆ ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಬಳಿ ನಡೆದಿದೆ.
ಮೃತ ಯುವತಿಯನ್ನು ಕುಂಬಳಗೂಡು ಸಮೀಪದ ರಾಮೋಹಳ್ಳಿ ಗ್ರಾಮದ ನಿವಾಸಿ ಭೂಮಿಕಾ (22) ಎಂದು ಗುರುತಿಸಲಾಗಿದೆ. ಭೂಮಿಕಾ ಸ್ನೇಹಿತರೊಂದಿಗೆ ಚನ್ನಪಟ್ಟಣಕ್ಕೆ ಆಗಮಿಸಿದ್ದರು ಎನ್ನಲಾಗಿದೆ.
ತಡರಾತ್ರಿ ಸಂಕಲಗೆರೆ ಬಳಿ ಎಕ್ಸ್ಪ್ರೆಸ್ವೇ ರಸ್ತೆ ದಾಟಲು ಯತ್ನಿಸುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿದೆ. ಡಿಕ್ಕಿಯ ಪರಿಣಾಮ ಭೂಮಿಕಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಘಟನೆಗೆ ಸಂಬಂಧಿಸಿದಂತೆ ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.