Shivamogga : ಶಿವಮೊಗ್ಗದಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಆಗುಂಬೆ ಸಮೀಪದ ಕವರಿಹಕ್ಲು ಬಳಿ ಅಪಘಾತಕ್ಕೀಡಾಗಿದೆ. 

Shivamogga :  ಆಗುಂಬೆ ಸಮೀಪ ಸಂಭವಿಸಿದ ಕಾರು ಅಪಘಾತದಲ್ಲಿ MBBS ವಿದ್ಯಾರ್ಥಿಯೊಬ್ಬರು ಮೃತಪಟ್ಟಿದ್ದಾರೆ.

ಮೃತರನ್ನು ರಾಯಚೂರು ಮೂಲದ ಡಾ. ಚೇತನ್ (28) ಎಂದು ಗುರುತಿಸಲಾಗಿದೆ. ಶಿವಮೊಗ್ಗದಿಂದ ಮಂಗಳೂರಿಗೆ ಐವರು ಸ್ನೇಹಿತರೊಂದಿಗೆ ತೆರಳುತ್ತಿದ್ದ ವೇಳೆ, ಕವರಿಹಕ್ಲು ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಮಣ್ಣಿನ ದಿಬ್ಬಕ್ಕೆ ಡಿಕ್ಕಿಯಾಗಿದೆ.

ಅಪಘಾತದಲ್ಲಿ ಚೇತನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಉಳಿದ ನಾಲ್ವರಿಗೆ ಗಾಯಗಳಾಗಿದ್ದು, ಅವರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಮಣಿಪಾಲ್‌ನ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚೇತನ್ ಅವರು ಶಿವಮೊಗ್ಗದ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಮತ್ತು ಎಂಡಿ ವ್ಯಾಸಂಗ ಮಾಡುತ್ತಿದ್ದರು ಎಂದು ವರದಿಯಾಗಿದೆ.

ಘಟನಾ ಸ್ಥಳಕ್ಕೆ ಆಗುಂಬೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.