Shivamogga ದ ವಡ್ಡಿನಕೊಪ್ಪದಲ್ಲಿ ಅಡಿಕೆ ಬೇಯಿಸುವಾಗ ಕಾಲು ಜಾರಿ ಹಂಡೆಯೊಳಗೆ ಬಿದ್ದ ಜೇನು ಕುಮಾರ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
Shivamogga : ಅಡಿಕೆ ಬೇಯಿಸುವಾಗ ಹಂಡೆಯೊಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ವಡ್ಡಿನಕೊಪ್ಪದ ಜೇನು ಕುಮಾರ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಸೆಪ್ಟೆಂಬರ್ 8ರಂದು ಮನೆ ಬಳಿಯ ಶೆಡ್ನಲ್ಲಿ ಅಡಿಕೆ ಬೇಯಿಸುತ್ತಿದ್ದ ವೇಳೆ, ಹಂಡೆಯಲ್ಲಿದ್ದ ಅಡಿಕೆ ಚೊಗರು ತೆಗೆಯಲು ಪಕ್ಕದಲ್ಲಿದ್ದ ಕಟ್ಟೆ ಏರಿದಾಗ ಕಾಲು ಜಾರಿ ಹಂಡೆಯೊಳಗೆ ಬಿದ್ದಿದ್ದರು.
ತಕ್ಷಣ ಸ್ಥಳದಲ್ಲಿದ್ದವರು ಅವರನ್ನು ಹೊರತೆಗೆದಿದ್ದು, ಬಳಿಕ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಜೇನು ಕುಮಾರ್ ಹಂಡೆಯೊಳಗೆ ಬೀಳುವ ದೃಶ್ಯ ಶೆಡ್ನಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.