ನಟಿ ತಮನ್ನಾ ಭಾಟಿಯಾ ಕುಟುಂಬ ಸಮೇತ ತಿರುಮಲ ತಿರುಪತಿ ದೇವಾಲಯಕ್ಕೆ ಭೇಟಿ ನೀಡಿ ಸುಪ್ರಭಾತ ಸೇವೆಯಲ್ಲಿ ಭಾಗವಹಿಸಿ ದೇವರ ದರ್ಶನ ಪಡೆದಿದ್ದಾರೆ.
ನಟಿ ತಮನ್ನಾ ಭಾಟಿಯಾ ಕುಟುಂಬ ಸಮೇತ ತಿರುಮಲ ತಿರುಪತಿ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ಬುಧವಾರ ತಿರುಮಲೆಗೆ ತೆರಳಿದ ಅವರು ಸುಪ್ರಭಾತ ಸೇವೆಯಲ್ಲಿ ಭಾಗವಹಿಸಿ ದೇವರ ಆಶೀರ್ವಾದ ಪಡೆದಿದ್ದಾರೆ.
ದರ್ಶನದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ತಮನ್ನಾ, ಚಿಕ್ಕ ವಯಸ್ಸಿನಿಂದಲೂ ತಿರುಪತಿ ದೇವಾಲಯಕ್ಕೆ ಬರುತ್ತಿದ್ದೇನೆ. ಆದರೆ ಈ ಬಾರಿ ದೊರೆತಂತಹ ಅನುಭವ ಹಿಂದೆಂದೂ ಆಗಿರಲಿಲ್ಲ ಎಂದು ಹೇಳಿದ್ದಾರೆ.
ಲೋಕ ಕಲ್ಯಾಣ ಹಾಗೂ ಎಲ್ಲರ ಒಳಿತಿಗಾಗಿ ದೇವರಲ್ಲಿ ಪ್ರಾರ್ಥಿಸಿರುವುದಾಗಿ ತಿಳಿಸಿದ ಅವರು, ತಿರುಮಲೆಗೆ ಬಂದಾಗಲೆಲ್ಲ ಮನಸ್ಸಿಗೆ ನೆಮ್ಮದಿ ಮತ್ತು ಸಂತೋಷ ಸಿಗುತ್ತದೆ ಎಂದಿದ್ದಾರೆ.
ತಮನ್ನಾ ತಿರುಮಲೆಗೆ ಭೇಟಿ ನೀಡಿರುವ ಫೋಟೋಗಳು ಹಾಗೂ ವಿಡಿಯೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಇತ್ತೀಚೆಗೆ ‘ವವಾನ್’ ಸಿನಿಮಾದಲ್ಲಿ ನಟಿಸಿದ್ದ ಅವರು, ಪ್ರಸ್ತುತ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.