ಶಾಸಕ ಷಡಕ್ಷರಿಗೆ ಕೈ ಟಿಕೆಟ್ ತಪ್ಪುವ ಭೀತಿ?- ಈ ಬಾರಿ ಇವರಿಗೆ ಟಿಕೆಟ್ ಸಿಗೋದು..?
2028ರ ವಿಧಾನಸಭಾ ಚುನಾವಣೆಗೆ ಒಂದೂವರೆ ವರ್ಷ ಬಾಕಿ ಇರುವಾಗಲೇ, ಟಿಕೆಟ್ಗಾಗಿ ಫೈಟ್ ಜೋರಾಗ್ತಾ ಇದೆ. ಅಲ್ದೇ ಟಿಕೆಟ್ಗಾಗಿ ಟಿಕೆಟ್ ಫೈಟ್ ನಡೆಸುತ್ತಿದ್ದಾರೆ. ಅದ್ರಲ್ಲೂ ಕಾಂಗ್ರೆಸ್ ಪಾಳಯದಲ್ಲಿ ಒಂದ್ಕಡೆ ಸಚಿವ ಸ್ಥಾನಕ್ಕಾಗಿ ಫೈಟ್ ಜೋರಾದ್ರೆ, ಇನ್ನೊಂದ್ಕಡೆ ಮುಂದಿನ ಎಲೆಕ್ಷನ್ಗೆ ಟಿಕೆಟ್ಗಾಗಿ ತೆರೆಮರೆಯಲ್ಲಿ ಲಾಭಿ ಶುರುವಾಗಿದೆ. ಇತ್ತ ತಿಪಟೂರು ಕಾಂಗ್ರೆಸ್ ಪಾಳಯದಲ್ಲಿ ಟಿಕೆಟ್ ಫೈಟ್ ಗರಿಗೆದರಿಕೊಂಡಿದ್ರೆ, ಹಾಲಿ ಶಾಸಕ ಷಡಕ್ಷರಿಗೆ ಟಿಕೆಟ್ ಕೈತಪ್ಪುವ ಭೀತಿ ಶುರುವಾಗಿದೆ.
ತಿಪಟೂರಿನ ಕಾಂಗ್ರೆಸ್ ಪಾಳಯದಲ್ಲಿ ಟಿಕೆಟ್ ಜಟಾಪಟಿ ತಾರಕಕ್ಕೇರಿದೆ. ಮುಂದಿನ ಚುನಾವಣಾ ಅಖಾಡಕ್ಕೆ ಕೈ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಕುತೂಹಲ ಗರಿಗೆದರಿದ್ದು, ಕಾಂಗ್ರೆಸ್ ಪಾಳಯದಲ್ಲೇ ಮೂವರು ನಾಯಕರ ನಡುವೆ ಬಿಗ್ ಫೈಟ್ ಶುರುವಾಗಿದೆ. ಹಾಲಿ ಶಾಸಕ ಕೆ. ಷಡಕ್ಷರಿಗೆ ಈ ಬಾರಿ ಟಿಕೆಟ್ ಸಿಗುವುದು ಡೌಟ್ ಎಂಬ ಮಾತುಗಳು ಕೇಳಿಬರುತ್ತಿದ್ದು, ಹೊಸ ಮುಖದ ಹುಡುಕಾಟದಲ್ಲಿ ಹೈಕಮಾಂಡ್ ಮುಂದಾಗಿದೆ ಅನ್ನೋ ಮಾತುಗಳು ಕೇಳಿ ಬಂದಿವೆ.
ಹೌದು. ತಿಪಟೂರಿನ ಕೆಪಿಸಿಸಿ ಸದಸ್ಯ ವಿ. ಯೋಗೇಶ್ ಹಾಗೂ ಟೂಡಾ ಮಾಜಿ ಅಧ್ಯಕ್ಷ ಶಶಿಧರ್ ಕೂಡ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಾಗಿ ಪ್ರಬಲವಾಗಿ ಗುರುತಿಸಿಕೊಂಡಿದ್ದಾರೆ. ಕಾಂಗ್ರೆಸ್ ಪಾಳಯದಲ್ಲಿ ಷಡಕ್ಷರಿ, ವಿ. ಯೋಗೇಶ್ ಹಾಗೂ ಶಶಿಧರ್ ನಡುವೆ ಬಿರುಸಿನ ಪೈಪೋಟಿ ಶುರುವಾಗಿದೆ. ಆದ್ರೆ ಹೈಕಮಾಂಡ್ ಯಾರಿಗೆ ಟಿಕೆಟ್ ನೀಡುತ್ತೆ ಅನ್ನೋದನ್ನ ಮುಂದಿನ ದಿನಗಳಲ್ಲಿ ಕಾದುನೋಡಬೇಕಿದೆ.
VOICE: ಹೌದು ಕೆಲ ರಾಜಕೀಯ ಸಮೀಕ್ಷೆಗಳಲ್ಲಿ ಈ ಬಾರಿ ತಿಪಟೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಅಷ್ಟು ಸುಲಭವಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಹೈಕಮಾಂಡ್ ಹೊಸ ಮುಖಕ್ಕೆ ಮಣೆ ಹಾಕುವ ಸಾಧ್ಯತೆ ಇದೆ ಎಂಬ ಚರ್ಚೆಗಳು ಕೇಳಿಬರುತ್ತಿವೆ. ಅಲ್ದೇ ಇತ್ತೀಚೆಗೆ ನಡೆದ ಕೆಲವು ಆಂತರಿಕ ಸಮೀಕ್ಷೆಗಳ ಪ್ರಕಾರ, ಕ್ಷೇತ್ರದಲ್ಲಿ ಹಾಲಿ ಶಾಸಕರ ವಿರುದ್ಧ ಆಡಳಿತ ವಿರೋಧಿ ಅಲೆ ವ್ಯಕ್ತವಾಗಿದ್ದು, ಈ ಬಾರಿ ಕಾಂಗ್ರೆಸ್ ಗೆಲುವು ಕಷ್ಟಸಾಧ್ಯ ಎಂಬ ವರದಿಗಳು ಹೈಕಮಾಂಡ್ ಕೈ ಸೇರಿವೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಕ್ಷೇತ್ರವನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಹೈಕಮಾಂಡ್ ಹೊಸ ಮುಖದತ್ತ ಒಲವು ತೋರುತ್ತಿದೆ. ಸಮೀಕ್ಷಾ ವರದಿಗಳೇ ಮಾನದಂಡವಾದರೆ ಕೆಪಿಸಿಸಿ ಸದಸ್ಯ ವಿ. ಯೋಗೇಶ್ ಅಥವಾ ಟೂಡಾ ಮಾಜಿ ಅಧ್ಯಕ್ಷ ಶಶಿಧರ್ ಅವರ ಪೈಕಿ ಒಬ್ಬರಿಗೆ ಅದೃಷ್ಟ ಒಲಿಯುವ ಸಾಧ್ಯತೆ ದಟ್ಟವಾಗಿದೆ.
ಒಟ್ಟಾರೆಯಾಗಿ, ತಿಪಟೂರು ಕಾಂಗ್ರೆಸ್ನಲ್ಲಿ ಭುಗಿಲೆದ್ದಿರುವ ಟಿಕೆಟ್ ಫೈಟ್ ಯಾವ ಹಂತಕ್ಕೆ ತಲುಪಲಿದೆ? ಹೈಕಮಾಂಡ್ ಹಾಲಿ ಶಾಸಕರಿಗೆ ಮಣೆ ಹಾಕುತ್ತಾ ಅಥವಾ ಹೊಸ ಮುಖಕ್ಕೆ ಮಣೆ ಹಾಕಿ ಅಚ್ಚರಿ ಮೂಡಿಸುತ್ತಾ ಎಂಬುದನ್ನು ಕಾದು ನೋಡಬೇಕಿದೆ.