ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕೋಡಿಹಳ್ಳಿ ಗೇಟ್ ಬಳಿ ಮಂತ್ರಾಲಯಕ್ಕೆ ತೆರಳುತ್ತಿದ್ದ ಟಿಟಿ ವಾಹನ ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ. 

ಚಿತ್ರದುರ್ಗ: ಮಂತ್ರಾಲಯಕ್ಕೆ ತೆರಳುತ್ತಿದ್ದ ಟಿಟಿ ವಾಹನ ಪಲ್ಟಿಯಾಗಿ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕೋಡಿಹಳ್ಳಿ ಗೇಟ್ ಬಳಿ ನಡೆದಿದೆ.

ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


ಮಂತ್ರಾಲಯದತ್ತ ತೆರಳುತ್ತಿದ್ದ ಟಿಟಿ ವಾಹನ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವಾಹನ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.ಘಟನೆಯಲ್ಲಿ ಟಿಟಿ ವಾಹನದಲ್ಲಿದ್ದ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.


ಕೂಡಲೇ ಗಾಯಾಳುಗಳನ್ನು ಚಳ್ಳಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ಕುರಿತು ಚಳ್ಳಕೆರೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.