ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಹೊನ್ನೇನಹಳ್ಳಿ ಗ್ರಾಮದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ರೈತ ರಂಗಶಾಮಣ್ಣ (60) ಮೃತಪಟ್ಟಿದ್ದಾರೆ. 

ತುಮಕೂರು: ವಿದ್ಯುತ್ ತಂತಿ ಸ್ಪರ್ಶಿಸಿ ರೈತ ಮೃತಪಟ್ಟಿರುವ ಘಟನೆ ಶಿರಾ ತಾಲೂಕಿನ ಗೌಡಗೆರೆ ಹೋಬಳಿಯ ಹೊನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು 60 ವರ್ಷದ ರಂಗಶಾಮಣ್ಣ ಎಂದು ಗುರುತಿಸಲಾಗಿದೆ.


ರಂಗಶಾಮಣ್ಣ ಅವರು ಎಂದಿನಂತೆ ತಮ್ಮ ಜಮೀನಿನಲ್ಲಿ ಕೃಷಿ ಚಟುವಟಿಕೆ ನಡೆಸಲು ತೆರಳುತ್ತಿದ್ದ ವೇಳೆ ವಿದ್ಯುತ್ ತಂತಿಯೊಂದು ಕಟ್ ಆಗಿ ನೆಲಕ್ಕೆ ಬಿದ್ದಿತ್ತು. ಇದನ್ನು ಗಮನಿಸದೆ ತಂತಿಯನ್ನು ಸ್ಪರ್ಶಿಸಿದ ಪರಿಣಾಮ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.


ಘಟನೆಗೆ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ವಿದ್ಯುತ್ ತಂತಿಗಳ ನಿರ್ವಹಣೆ ಹಾಗೂ ಸುರಕ್ಷತೆಗೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಘಟನಾ ಸ್ಥಳಕ್ಕೆ ಶಿರಾ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.