ತುಮಕೂರು ದಸರಾ ವೈಭವ–2026ಕ್ಕೆ ಅದ್ಧೂರಿ ಚಾಲನೆ ದೊರೆತಿದೆ. ಜೂನಿಯರ್ ಕಾಲೇಜು ಮೈದಾನದಲ್ಲಿ ಡಿಸಿಎಂ ಜಿ. ಪರಮೇಶ್ವರ್ ಹಾಗೂ ಮಠಾಧೀಶರು ಧ್ವಜಾರೋಹಣ ನೆರವೇರಿಸಿದರು. 

ತುಮಕೂರು: ನಗರದ ದಸರಾ ವೈಭವ–2026ಕ್ಕೆ ಅದ್ಧೂರಿ ಚಾಲನೆ ದೊರೆತಿದೆ. ಜೂನಿಯರ್ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಹಾಗೂ ಮಠಾಧೀಶರು ಧ್ವಜಾರೋಹಣ ನೆರವೇರಿಸಿದರು.


ತುಮಕೂರು ದಸರಾ ಲೋಗೋ ಹಾಗೂ ಕನ್ನಡದ ಬಾವುಟವನ್ನು ಹಾರಿಸುವ ಮೂಲಕ ಉತ್ಸವಕ್ಕೆ ಅಧಿಕೃತ ಚಾಲನೆ ನೀಡಲಾಯಿತು. ಬಳಿಕ ಡಿಸಿಎಂ ಪರಮೇಶ್ವರ್ ಅವರು ಪತ್ನಿ ಕನ್ನಿಕಾ ಪರಮೇಶ್ವರ್ ಅವರೊಂದಿಗೆ ತಾಯಿ ಚಾಮುಂಡೇಶ್ವರಿಗೆ ಅಭಿಷೇಕ ನೆರವೇರಿಸಿ ವಿಶೇಷ ಪೂಜೆ ಸಲ್ಲಿಸಿದರು. ಗಣಹೋಮದಲ್ಲಿಯೂ ದಂಪತಿ ಪಾಲ್ಗೊಂಡರು.


ನಂತರ ಅಮರಶಿಲ್ಪಿ ಜಕಣಾಚಾರಿ ಸಾಂಸ್ಕೃತಿಕ ವೇದಿಕೆಯಲ್ಲಿ ದಸರಾ ವೈಭವದ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಶಾಸಕರಾದ ಹೆಚ್.ವಿ. ವೆಂಕಟೇಶ್, ಜ್ಯೋತಿ ಗಣೇಶ್, ಕೆ. ಷಡಕ್ಷರಿ ಸೇರಿದಂತೆ ಹಲವು ಜನಪ್ರತಿನಿಧಿಗಳು, ಮಠಾಧೀಶರು ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ಧಾರ್ಮಿಕ ವಿಧಿವಿಧಾನಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಸಾರ್ವಜನಿಕರ ಪಾಲ್ಗೊಳ್ಳುವಿಕೆಯೊಂದಿಗೆ ತುಮಕೂರು ದಸರಾ ಸಂಭ್ರಮಕ್ಕೆ ಕಳೆ ಬಂದಿದೆ.