ಉಡುಪಿಯ ಅಲೆವೂರು-ದೆಂದೂರುಕಟ್ಟೆ ಬಳಿ ಪೆಟ್ರೋಲ್ ಪಂಪ್ ಸಮೀಪ ನಿಲ್ಲಿಸಿದ್ದ ಬಸ್ ಏಕಾಏಕಿ ಹೊತ್ತಿ ಉರಿದಿದೆ.
ಉಡುಪಿ: ನಗರದ ಅಲೆವೂರು-ದೆಂದೂರುಕಟ್ಟೆ ಬಳಿ ಪೆಟ್ರೋಲ್ ಪಂಪ್ ಸಮೀಪ ನಿಲ್ಲಿಸಿದ್ದ ಬಸ್ವೊಂದು ಶುಕ್ರವಾರ ಬೆಳಗಿನ ಜಾವ ಏಕಾಏಕಿ ಹೊತ್ತಿ ಉರಿದಿದೆ.
ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಪೆಟ್ರೋಲ್ ಪಂಪ್ ಸಿಬ್ಬಂದಿ ಕಾರ್ಯಪ್ರವೃತ್ತರಾಗಿ ಬೆಂಕಿ ನಂದಿಸಿದ್ದಾರೆ. ಬಸ್ನ ಸಮೀಪವೇ ಇನ್ನೆರಡು ಬಸ್ಗಳು ಹಾಗೂ ಟೆಂಪೋ ನಿಲ್ಲಿಸಲಾಗಿತ್ತು. ಅಲ್ಲದೆ, ಪಕ್ಕದಲ್ಲೇ ಪೆಟ್ರೋಲ್ ಪಂಪ್ ಇದ್ದ ಹಿನ್ನೆಲೆ ಬೆಂಕಿ ವ್ಯಾಪಿಸಿದ್ದರೆ ಭಾರಿ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು.
ಆದರೆ, ಸಮಯಕ್ಕೆ ಸರಿಯಾಗಿ ಬೆಂಕಿ ನಂದಿಸಿದ್ದರಿಂದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನೆಯಿಂದ ಬಸ್ಗೆ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.
ಪೆಟ್ರೋಲ್ ಪಂಪ್ ಮಾಲೀಕರು ಹಾಗೂ ಬಸ್ ಮಾಲೀಕರು ಒಬ್ಬರೇ ಎಂದು ತಿಳಿದುಬಂದಿದ್ದು, ಬೆಂಕಿ ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.